ಹಳೇರಿತ್ತಿಯಲ್ಲಿ ವಿದ್ಯುತ್ ಪ್ರವಹಿಸಿ ರೈತ ಸಾವು

Umesh Death
Published on

ಹಾವೇರಿ: ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ದಾರುಣ ಘಟನೆ ಗುರುವಾರ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ. ಉಮೇಶ ಬೆಳವಗಿ (33) ಮೃತ ರೈತ. ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ರಂಟೆ ಹೊಡೆಯುವಾಗ ಹಿಂಬದಿಯಲ್ಲಿ ಕಟ್ಟಾಗಿ ಬಿದ್ದಿದ್ದ ವಿದ್ಯುತ್ ತಂತಿ ಗಮನಿಸದೇ ಟ್ರಾ್ಯಕ್ಟರ್ ಚಲಾಯಿಸಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net