ರೈತರಿಗೆ ಅಭಿವೃದ್ಧಿಗೆ ಹಲವು ಸೌಲಭ್ಯ

4.ktal.01
Published on

ಕವಿತಾಳ: ಪಾಮನಕಲ್ಲೂರಿನಲ್ಲಿ ರೈತ ಸಂಪರ್ಕ ಕೇಂದ್ರದ ಕಟ್ಟಡವನ್ನು ಗ್ರಾಪಂ ಅಧ್ಯಕ್ಷ ರಾಜಸಾಬ್ ಅಂಗಡಿ ಶನಿವಾರ ಉದ್ಘಾಟಿಸಿದರು. ಆರ್‌ಐಡಿಎಫ್ 23 ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕ ನಯೀಮ್ ಹುಸೇನ್ ಮಾತನಾಡಿ, ರೈತರ ಬಗ್ಗೆ ನಿರ್ಲಕ್ಷೃ ಸರಿಯಲ್ಲ. ದೇಶದ ಅಭಿವೃದ್ಧಿಗಾಗಿ ರೈತರ ಅಭಿವೃದ್ಧಿ ಮುಖ್ಯವಾಗಿದೆ. ರೈತರ ಅಭಿವೃದ್ಧಿಗಾಗಿ ಸರ್ಕಾರ ಸವಲತ್ತುಗಳನ್ನು ನೀಡುತ್ತಿದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net