ರೈತರು ಎರೆಹುಳು ಗೊಬ್ಬರ ತಯಾರಿಸಿ ಬಳಸಲಿ

Farmers, Earthworm Fertilizer, Dharwad Agricultural University, Chancellor, Dr. P.L. Patil, Rural Agriculture Experience Camp, Agricultural Resources, Agricultural Technology, Material Exhibition, Dhavalgi,
ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ನಡೆದ ಕೃಷಿ ತಂತ್ರಜ್ಞಾನ ವಸ್ತು ಪ್ರದರ್ಶನವನ್ನು ಗಣ್ಯರು ಉದ್ಘಾಟಿಸಿದರು. ಡಾ.ಆರ್.ಬಿ.ಬೆಳ್ಳಿ, ಸಿ.ಆರ್. ಪಾಟೀಲ, ಡಾ.ಎ.ಪಿ.ಬಿರಾದಾರ, ಎಸ್.ಎಂ.ವಸ್ತ್ರದ, ಹರೀಶ ಕುಮಾರ, ಸಿದ್ದರಾಮ ಪಾಟೀಲ ಇತರರಿದ್ದರು.
Published on

ಢವಳಗಿ: ರೈತರು ಸಮಗ್ರ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ವಸ್ತು ಪ್ರದರ್ಶನಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.

ಢವಳಗಿ ಸಮೀಪದ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ, ಕೃಷಿ ಸಂಪದ, ಕೃಷಿ ತಂತ್ರಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಣ್ಣು ಮತ್ತು ನೀರಿನ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಮತ್ತು ಕೃಷಿ ಉಪ ಕಸಬುಗಳಾದ ಕುರಿ, ಕೋಳಿ, ಆಡು ಸಾಕಣೆ, ಜೇನುಕೃಷಿಯ ಬಗ್ಗೆ ಮಾಹಿತಿ ಪಡೆದು ಉದ್ಯೋಗ ಕೈಗೊಂಡರೆ ಉತ್ತಮ ಆದಾಯ ಗಳಿಸಬಹುದು. ಹೊಲದಲ್ಲಿನ ಕಸದಿಂದ ಕಾಂಪೋಸ್ಟ್ ಗೊಬ್ಬರ, ಎರೆಹುಳು ಗೊಬ್ಬರ ಹಾಗೂ ಜೀವಾಮೃತವನ್ನು ರೈತರೇ ತಯಾರಿಸಿ ಬಳಸಿದರೆ ಭೂಮಿಗೂ ಒಳ್ಳೆಯ ಆಹಾರ ಸಿಕ್ಕಂತಾಗುತ್ತದೆ ಎಂದರು.

ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ವಿ.ಆರ್.ಕಿರೆಸೂರ, ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕ ಡಾ.ಆರ್.ಬಿ.ಜೊಳ್ಳಿ, ಪವಾಡ ಬಸವೇಶ್ವರ ಸಂಸ್ಥೆ ಅಧ್ಯಕ್ಷ ಕೆ.ವೈ.ಬಿರಾದಾರ, ಬಸರಕೋಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್.ಬಿ.ಮೇಟಿ, ಹೇಮರಡ್ಡಿ ಮೇಟಿ, ವಿಜಯಪುರ ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಭೀಮಪ್ಪ ಎ ಮಾತನಾಡಿದರು.

ಸಹ ಸಂಶೋಧನಾ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ, ಧಾರವಾಡ ಕೃಷಿ ಮಹಾವಿದ್ಯಾಲಯ ಪ್ರಾಧ್ಯಾಪಕ ಸಿ.ಆರ್. ಪಾಟೀಲ, ಕೀಟಶಾಸ್ತ್ರ ತಜ್ಞ ಡಾ.ಎ.ಪಿ.ಬಿರಾದಾರ, ಕೆವಿಕೆ ಮುಖ್ಯಸ್ಥ ಮತ್ತು ರೋಗ ಶಾಸ್ತ್ರ ತಜ್ಞ ಎಸ್.ಎಂ.ವಸ್ತ್ರದ, ತೋಟಗಾರಿಕೆ ತಜ್ಞರಾದ ಕುಶಾಲ, ಹರೀಶ ಕುಮಾರ, ಮಣ್ಣು ಶಾಸ್ತ್ರ ತಜ್ಞ ಸಿದ್ದರಾಮ ಪಾಟೀಲ, ಬೇಸಾಯ ಶಾಸ್ತ್ರ ತಜ್ಞ ಬಿ.ಟಿ. ನಾಡಗೌಡ ಹಾಗೂ ಬಸರಕೋಡ, ಢವಳಗಿ, ರೂಡಗಿ, ಸಿದ್ದಾಪುರ ಗ್ರಾಮದ ರೈತರು, ಅಂತಿಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net