ರೈತರ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಿ

7 hrp 02
ಅರಸೀಕೆರೆ ಗ್ರಾಮದ ವೈ.ಅಣ್ಣಪ್ಪ ಪದವಿ ಕಾಲೇಜಿನಲ್ಲಿ ಗುರುವಾರ ಕನ್ನಡ ವಿವಿ ಸಹಯೋಗದೊಂದಿಗೆ ಆಯೋಜಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಂಡೂರಿನ ಪ್ರಭುದೇವ ಸ್ವಾಮೀಜಿ ಮಾತನಾಡಿದರು. ಮನಶಾಸ್ತ್ರ ವಿಭಾಗದ ಮುಖ್ಯಸ್ಥ ತಾರಿಹಳ್ಳಿ ಹನುಮಂತಪ್ಪ, ಪ್ರಾಚಾರ್ಯ ಎಂ. ಸುರೇಶ, ಉಮೇಶ, ಹಾದಿಮನೆ ರಮೇಶ, ಡಿ.ಹನುಮಂತಪ್ಪ ಇತರರಿದ್ದರು.
Published on

ಹರಪನಹಳ್ಳಿ: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಂಜುಂಡಪ್ಪ ವರದಿ ಸಹಕಾರಿಯಾಗಿದೆ ಎಂದು ಕನ್ನಡ ವಿವಿ ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕ ವಿರೂಪಾಕ್ಷಿ ಪೂಜಾರಹಳ್ಳಿ ಹೇಳಿದರು.

ತಾಲೂಕಿನ ಅರಸೀಕೆರೆ ಗ್ರಾಮದ ವೈ. ಅಣ್ಣಪ್ಪ ಪದವಿ ಕಾಲೇಜಿನಲ್ಲಿ ಕನ್ನಡ ವಿವಿಯ ಮಾನವಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ‘ಕಲ್ಯಾಣ ಕರ್ನಾಟಕದ ಹಿಂದುಳಿದ ವರ್ಗಗಳ ಸಮಸ್ಯೆ ಮತ್ತು ಸವಾಲುಗಳ’ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಗುರುವಾರ ಮಾತನಾಡಿದರು.

ರೈತರ ಆರ್ಥಿಕ ಪ್ರಗತಿಗೆ ಸರ್ಕಾರ ಅಗತ್ಯವಾದ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿಗೆ ಶ್ರಮಿಸಬೇಕು. ಅಸ್ಪಶ್ಯತೆ, ಮೂಢ ನಂಬಿಕೆಗಳಿಂದ ಸಮಾಜ ಹಿಂದುಳಿದಿದ್ದು, ಪರಿವರ್ತನೆಗೆ ಶಿಕ್ಷಣ ಅಗತ್ಯ ಎಂದರು.

ಸಂಡೂರು ವಿರಕ್ತಮಠದ ಪ್ರಭುದೇವ ಸ್ವಾಮೀಜಿ ಮಾತನಾಡಿ, ವಚನ ಸಾಹಿತ್ಯ, ಬಂಡಾಯ ಸಾಹಿತ್ಯ ಸೇರಿದಂತೆ ಶ್ರೀಮಂತ ಸಾಹಿತ್ಯಕ್ಕೆ ಕಲ್ಯಾಣ ಕರ್ನಾಟಕ ದೊಡ್ಡ ಕೊಡುಗೆ ನೀಡಿದೆ. ಆದರೆ ಅಭಿವೃದ್ಧಿ ಹಿನ್ನಡೆಯನ್ನು ಅವಲೋಕಿಸಿ ಸರ್ಕಾರ ಅಭಿವೃದ್ಧಿ ಪಡಿಸಬೇಕು. ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕನ್ನಡ ವಿವಿಯಲ್ಲಿ ಜಾನಪದ ಅಧ್ಯಯನ ಕೇಂದ್ರ ಸ್ಥಾಪನೆ ಆಗಬೇಕು ಎಂದರು.

ಉದ್ಯಮಿ ಪ್ರಶಾಂತ ಪಾಟೀಲ್ ಮಾತನಾಡಿ, ಬಡತನ, ಅನಕ್ಷರತೆಯಿಂದ ಸರ್ಕಾರದ ಯೋಜನೆಗಳು ಜನರಿಗೆ ತಲಪುತ್ತಿಲ್ಲ. ಬದಲಾಗಿ ಉಳ್ಳವರ ಪಾಲಾಗುತ್ತಿದೆ. ಅವುಗಳನ್ನು ಪಡೆಯಲು ಹೋರಾಟ ಅನಿವಾರ್ಯವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net