ಸಂಚಾರಕ್ಕೆ ರೈತರ ಪರದಾಟ

09 svr 03
Published on

ಸವಣೂರ: ನಿರಂತರ ಮಳೆಗೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ಮುಖ್ಯ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ರೈತರು, ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ.

ತಾಲೂಕಿನ ಕಳಸೂರ ಗ್ರಾಮದಿಂದ ಮಂಟಗಣಿಗೆ ತೆರಳುವ ಮಾರ್ಗ ಮಧ್ಯೆ ರೈಲು ಹಳಿಗೆ ನಿರ್ವಿುಸಿರುವ ಕಿರು ಸೇತುವೆ ಕೆಳ ರಸ್ತೆ ನಿರ್ಮಾಣ ಕಳಪೆಯಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ಈ ದಾರಿಯಲ್ಲಿ ಹಾದುಹೋಗುವ ಪ್ರಯಾಣಿಕರು ಹಾಗೂ ರೈತರು ನಿತ್ಯ ಪರದಾಡುವಂತಾಗಿದೆ. ಈ ಕುರಿತು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಕೈಗೊಂಡು ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು ಎಂದು ಕಳಸೂರ ಹಾಗೂ ಮಂಟಗಣಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net