ಕಮರಹಳ್ಳಿ ಕೆರೆ ಪಂಪ್‌ಹೌಸ್‌ಗೆ ರೈತರ ಮುತ್ತಿಗೆ

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕೆರೆಗಳಿಗೆ ಗಾಂಧಿಗ್ರಾಮ ಏತ ನೀರಾವರಿ ಯೋಜನೆಯಡಿ ನೀರು ಹರಿಸುವಂತೆ ಒತ್ತಾಯಿಸಿ ಕಮರಹಳ್ಳಿ ಕೆರೆ ಪಂಪ್ ಹೌಸ್‌ನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮಹದೇವಪ್ಪ, ಸಂಪತ್ತು, ಮಹೇಶ್ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕೆರೆಗಳಿಗೆ ಗಾಂಧಿಗ್ರಾಮ ಏತ ನೀರಾವರಿ ಯೋಜನೆಯಡಿ ನೀರು ಹರಿಸುವಂತೆ ಒತ್ತಾಯಿಸಿ ಕಮರಹಳ್ಳಿ ಕೆರೆ ಪಂಪ್ ಹೌಸ್‌ನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮಹದೇವಪ್ಪ, ಸಂಪತ್ತು, ಮಹೇಶ್ ಇದ್ದರು.
Published on

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಕಮರಹಳ್ಳಿ ಕೆರೆ ಪಂಪ್‌ಹೌಸ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗಾಂಧಿ ಗ್ರಾಮ ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ಎರಡು ವರ್ಷದಿಂದ ನೀರು ಬಿಡದೆ ಸತಾಯಿಸುತ್ತಿರುವ ನೀರಾವರಿ ಇಲಾಖೆ ಇಂಜಿನಿಯರ್‌ಗಳ ವಿರುದ್ಧ ರೈತ ಸಂಘ ಹಾಗೂ ಸೇನೆಯ ಜಿಲ್ಲಾಧ್ಯಕ್ಷ ಮಾಡ್ರಳ್ಳಿ ಎಸ್. ಮಹದೇವಪ್ಪ ನೇತೃತ್ವದಲ್ಲಿ ರೈತರು ಕಮರಹಳ್ಳಿ ಕೆರೆ ಪಕ್ಕದ ಪಂಪ್ ಹೌಸ್ ಎದುರು ಪ್ರತಿಭಟನೆ ನಡೆಸಿದರು. ನೀರು ಬಿಡುವವರೆಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.

ಈ ಬಗ್ಗೆ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ಕೆ.ಎಸ್.ಮಹೇಶ್ ಆಗಮಿಸಿ ರೈತರ ಅಹವಾಲು ಆಲಿಸಿದರು. ಶುಕ್ರವಾರ ಸಂಜೆ ಇಲ್ಲವೇ ಶನಿವಾರ ಬೆಳಗ್ಗೆ ನೀರು ಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂದಕೆರೆ ಸಂಪತ್ತು, ಹಿರೀಕಾಟಿಚ್ ಚಿಕ್ಕಣ್ಣ, ಲೋಕೇಶ್, ಸ್ವಾಮಿ, ಸೋಮಣ್ಣ ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net