‘ಯೂರಿಯಾ ಕೊರತೆ’ ರೈತರ ಆಕ್ರೋಶ

25 KLG 2
Published on

ಕಲಘಟಗಿ: ತಾಲೂಕಿನಾದ್ಯಂತ ಯೂರಿಯಾ ಗೊಬ್ಬರ ಕೊರತೆ ಹೆಚ್ಚಾಗಿರುವುದರಿಂದ ರೈತರು ಪ್ರತಿನಿತ್ಯ ಕೃಷಿ ಕೇಂದ್ರಕ್ಕೆ ಅಲೆದಾಡುತ್ತಿದ್ದರೂ ಇದುವರೆಗೂ ಶಾಸಕರು, ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಾರಿ 35,141 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಅದರಲ್ಲಿ ಮೆಕ್ಕಜೋಳ, ಕಬ್ಬು, ಸೋಯಾಬೀನ್, ಭತ್ತ ಸೇರಿದಂತೆ ಇತರ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ.

ರಸಗೊಬ್ಬರದ ಕೊರೆತೆಯ ಬಗ್ಗೆ ಈಗಾಗಲೇ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು, ರೈತರು ಯಾವುದೇ ಗೊಂದಲ ಮಾಡಿಕೊಳ್ಳಬಾರದು. ಹೆಚ್ಚಿನ ಬೆಲೆಗೆ ರಸಗೊಬ್ಬರ ಖರೀದಿಗೆ ಮುಂದಾಗಬಾರದು ಎಂದು ಪ್ರಭಾರಿ ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net