ಕಲಬುರಗಿಗೆ ಬರಲಿದೆ ರೈತರ ಪಾದಯಾತ್ರೆ

bara
Published on


ವಿಜಯವಾಣಿ ಸುದ್ದಿಜಾಲ ಚಿಂಚೋಳಿ
ಕಲಬುರಗಿಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು, ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿAದ ಚಿಂಚೋಳಿಯಿAದ ಕಲಬುರಗಿ  ಡಿಸಿ ಕಚೇರಿವರೆಗೆ ಹಮ್ಮಿಕೊಂಡ ಬೃಹತ್ ಪಾದಯಾತ್ರೆಗೆ ಬುಧವಾರ ಇಲ್ಲಿ ಚಾಲನೆ ನೀಡಲಾಗಿದೆ.
ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾಳಾಗಿದೆ. ಕೂಡಲೆ ಜಂಟಿ ಸಮೀಕ್ಷೆ ಆರಂಭಿಸಿ, ರೈತರಿಗೆ ಸೂಕ್ತ ಪರಿಹಾರ ವಿತರಿಸಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಹಣ ಕಟ್ಟಿದ ರೈತರನ್ನು ಬಿಟ್ಟು, ವಿಮೆ ಕಟ್ಟದವರಿಗೆ ಹಣ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಸಂಬAಧಿತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟ ನಿಯಂತ್ರಿಸಬೇಕು. ಬಿಪಿಎಲ್, ಎಪಿಎಲ್ ತಾರತಮ್ಯವಿಲ್ಲದೆ ಎಲ್ಲರಿಗೂ ಆಹಾರ ಧಾನ್ಯ ಪೂರೈಸಬೇಕು. ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದAತೆ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ದಿನಗಳನ್ನು ೨೦೦ಕ್ಕೆ ಹೆಚ್ಚಿಸಬೇಕು. ಬರಗಾಲದ ಕೂಲಿಯಾಗಿ ೬೦೦ ರೂ.ಪಾವತಿಸಬೇಕು. ರೈತರು, ಕೃಷಿ ಕೂಲಿಕಾರರ ಆತ್ಮಹತ್ಯೆ ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಜಾಫರ್‌ಖಾನ್ ಮಿರಿಯಾಣ, ಪ್ರಮುಖರಾದ ಪ್ರಭು ಪ್ಯಾರಸಬಾದಿ, ದಿಲೀಪಕುಮಾರ, ರಾಯಪ್ಪ ಹುರಮುಂಜಿ, ಸಿದ್ದಾರ್ಥ ಠಾಕೂರ್, ಪರಮೇಶ್ವರ ಕಾಂತಾ, ರಾಮಚಂದ್ರ, ತುಳಜಪ್ಪ ಮೋಘಾ, ತುಕರಾಮ ಮೋಘಾ, ಜಗದೇವಿ ಚಂದನಕೇರಾ, ಅಹ್ಮದ್‌ಅಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net