ಭೂ ಸುಧಾರಣಾ ಕಾಯ್ದೆಗೆ ವಿರೋಧ; ಚಟ್ಟ ಕಟ್ಟಿದ ರೈತರು

protest kodihalli
Published on

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಮೌರ್ಯ ವೃತ್ತದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಮುಖಂಡರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಚಟ್ಟ ಸಿದ್ಧಪಡಿಸಿ ಅಣಕು ಪ್ರದರ್ಶನದ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಈ ಸರ್ಕಾರ ಸತ್ತು ಹೋದಂತೆ ಬದುಕುತ್ತಿದೆ. ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net