ಪರಿಹಾರಕ್ಕಾಗಿ ರೈತರ ಪ್ರತಿಭಟನೆ

14 mlv1
Published on

ಮಳವಳ್ಳಿ: ಹೆದ್ದಾರಿ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಪರಿಹಾರವನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿ ರೈತರು ಕರ್ನಾಟಕ ಪ್ರಾಂತ ರೈತಸಂಘದ ನೇತೃತ್ವದಲ್ಲಿ ಶುಕ್ರವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಬೆಳಕವಾಡಿ ಸಮೀಪ ರೈತರ ಭೂಮಿ ವಶಪಡಿಸಿಕೊಂಡಿದ್ದು, ನಾಲ್ಕು ವರ್ಷಗಳಿಂದ ಪರಿಹಾರ ನೀಡಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ರೈತರಿಂದ ಜಮೀನನ್ನು ಸ್ವಾಧೀನ ಪಡೆಯುವ ವೇಳೆ ತ್ವರಿತವಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿ ಒಪ್ಪಿಗೆ ಪತ್ರ ಪಡೆಯಲಾಗಿದೆ. ಆದರೆ, ಇದುವರೆಗೂ ಪರಿಹಾರ ನೀಡದೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತರು ಕರ್ನಾಟಕ ಪ್ರಾಂತ ರೈತಸಂಘದ ಅಧ್ಯಕ್ಷ ಭರತ್ ರಾಜ್, ಮುಖಂಡರಾದ ಲೋಕೇಶ್, ಮಹಾದೇವಪ್ಪ, ಕರಿಯಪ್ಪ, ರಾಜಣ್ಣ, ಗುರುಸ್ವಾಮಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net