5ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತರ ಪ್ರತಿಭಟನೆ

Kaveri (1)
Published on

ರಾಜ್ಯ ಸರ್ಕಾರ ಬರ ಘೋಷಣೆ ಮಾಡಬೇಕು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವ ಮೂಲಕ ರೈತರನ್ನು ರಕ್ಷಿಸಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಸೆ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರೈತ ಸಂಘ ಪ್ರತಿಭಟನೆ ನಡೆಸಲಿದೆ.

ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ ಈ ಕುರಿತ ಆದೇಶದ ಬಗ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು. ಕಾವೇರಿ ನೀರಾವರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಎಕರೆಗೆ ತಲಾ 25 ಸಾವಿರ ರೂ. ಪರಿಹಾರ ನೀಡಬೇಕು. ಹೊಸ ಸಂಕಷ್ಟ ಸೂತ್ರಕ್ಕೆ ರಾಜ್ಯ ಸರ್ಕಾರ ಕೋರಬೇಕು. ಕರ್ನಾಟಕ ಹಾಗೂ ತಮಿಳುನಾಡು ನಡುವೆ ದೀರ್ಘಾವಧಿ ಕಾವೇರಿ ವಿವಾದ ಇರುವ ಕಾರಣ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ಈ ಬಾರಿ ನೀರಿನ ಕೊರತೆಯುಂಟಾಗಲಿದೆ. ಹೀಗಾಗಿ ಕಡಿಮೆ ನೀರು ಅಗತ್ಯವಾದ ಬೆಳೆ ಬೆಳೆಯಿರೆಂದು ತಿಳಿಸಬಹುದಾಗಿತ್ತು. ಆದರೆ ಆ ರೀತಿ ಮಾಡದಿದ್ದರಿಂದಾಗಿ ರೈತರು ಹೆಚ್ಚು ನೀರು ಅಗತ್ಯವಾಗಿರುವ ಬೆಳೆ ಬೆಳೆದು ಈಗ ನೀರು ಕೊರತೆಯಿಂದ ಬೆಳೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಈ ರೀತಿ ರೈತರಿಗೆ ಅಪಾರ ನಷ್ಟವಾಗುವ ಕಾರಣ ಸರ್ಕಾರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಸಹ ಬರ ಕುರಿತ ರಾಜ್ಯ ಸರ್ಕಾರದ ಶಿಾರಸು ಒಪ್ಪಬೇಕು, ಈ ಬಗೆಗಿನ ಮಾನದಂಡ ಮಾರ್ಪಡಿಸಬೇಕು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ಜಲ ಪ್ರಾಧಿಕಾರಕ್ಕೆ ಪುನರ್ ಪರಿಶೀಲನಾ ಅರ್ಜಿ ಹಾಕುವುದಾಗಿ ಹೇಳಿದ್ದಾರೆ. ಆದರೆ ಇದು ತಡವಾಗಿದೆ. ಈ ಮೊದಲೇ ಈ ಕೆಲಸ ಮಾಡಬೇಕಾಗಿತ್ತು. ಇದರೊಡನೆ ಕೇಂದ್ರದ ತಜ್ಞರು ರಾಜ್ಯಕ್ಕೆ ಭೇಟಿ ನೀಡಿ ಪರಾಮರ್ಶಿಸಬೇಕೆಂದು ಹೇಳುತ್ತಿದ್ದಾರೆ. ಇದೇ ಕೆಲಸ ಮೊದಲೇ ಮಾಡಬಹುದಾಗಿತ್ತು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net