ದೇಶದ ಆರ್ಥಿಕಾಭಿವೃದ್ಧಿಯಲ್ಲಿ ರೈತರ ಪಾತ್ರ ಪ್ರಮುಖ; ವಿಪ ಸದಸ್ಯ ಸುನೀಲಗೌಡ ಪಾಟೀಲ

SUNILGOUDA IN DHARAMASABHE
ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನಡೆದ ಕುಂಭಮೇಳ ಹಾಗೂ ಧರ್ಮಸಭೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಅಭಿನವ ಸಂಗನಬಸವ ಶಿವಾಚಾರ್ಯರು, ಶಿವಯೋಗೀಶ್ವರ ಸ್ವಾಮೀಜಿ, ಡಾ. ವಿವೇಕಾನಂದ ದೇವರು ಮತ್ತಿತರರಿದ್ದಾರೆ.
Published on

ವಿಜಯಪುರ: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಸಚಿವ ಎಂ.ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿಯೇ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ರೈತರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದರಿಂದ ಕಿರಾಣಿ ವ್ಯಾಪಾರ, ಹೊಟೇಲುಗಳು, ರಸಗೊಬ್ಬರ ವ್ಯಾಪಾರ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತಿದೆ. ಇದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೂ ಕೊಡುಗೆ ನೀಡುತ್ತಿದೆ. ಆರ್ಥಿಕವಾಗಿ ಸಬಲರಾಗುತ್ತಿರುವ ರೈತರು ತಮ್ಮ ಕುಟುಂಬಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು.

ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು, ಕಾಖಂಡಕಿ ಶ್ರೀ ಗುರುದೇವ ಆಶ್ರಮದ ಶಿವಯೋಗಿಶ್ವರ ಸ್ವಾಮೀಜಿ, ಗುಣದಾಳ ಕಲ್ಯಾಣೇಶ್ವರ ಮಠದ ಡಾ. ವಿವೇಕಾನಂದ ದೇವರು, ಹೆಬ್ಬಾಳಟ್ಟಿ ಚಂದ್ರಗಿರಿ ಸಿದ್ರಾಮೇಶ್ವರ ಮಠದ ಸಿದ್ದಲಿಂಗಯ್ಯ ರು. ಹಿರೇಮಠ, ಅರ್ಜುಣಗಿಯ ಶಿವಕುಮಾರ ಮಠ, ಹೆಬ್ಬಾಳಟ್ಟಿಯ ಶಣ್ಮುಖಯ್ಯ ಮಠಪತಿ, ಸಿದ್ದರಾಮ ಮ. ಕಾಖಂಡಕಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net