

ಕೊಪ್ಪಳ: ಜಿಲ್ಲೆಯ ರೈತರಿಗೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಸಲ್ಲಿಸಲಾಗಿದೆ. ಕಳೆದ 5 ವರ್ಷದಲ್ಲಿ ವರ್ಷಕ್ಕೆ 25&30 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ 28 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ತಲಾ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಅವರ ಕುಟುಂಬಕ್ಕೆ ವಿಧವಾ ವೇತನ, ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ತಿಳಿಸಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರೈತರಿಗೆ ಆತ್ಮಸೆರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. 1,02,219 ರೈತರಿಗೆ 122 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ. 2023&-24 ನೇ ಸಾಲಿನಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ 75,519 ಫಲಾನುಭವಿಗಳಿಗೆ 84.14 ಕೋಟಿ ರೂ. ಬೆಳೆವಿಮೆ ಪಾವತಿಸಲಾಗಿದೆ. 2023&-24ರಲ್ಲಿ 2,22,971 ರೈತರಿಗೆ 2581.90- ಕೋಟಿ ರೂ. ಬೆಳೆ ಸಾಲ ವಿತರಿಸಲಾಗಿದೆ. ಮರು ಸಾಲ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಲಾಗಿದೆ.
ಬರ ಪರಿಹಾರವಾಗಿ 51,645 ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 14.80- ಕೋಟಿ ರೂ.ಪರಿಹಾರ ಬಿಡುಗಡೆಯಾಗಿದೆ. ರೈತರು, ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರಿಗೆ ನೋಟಿಸ್ ನೀಡದಂತೆ ಸೂಚಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಕೃಷಿ ಸಖಿ, ಪಶು ಸಖಿಗಳ ಸಹಕಾರದೊಂದಿಗೆ ರೈತರಿಗೆ ಯೋಜನೆ ತಲುಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.