ಡಿಸಿ ಕಚೇರಿ ಎದುರು ರೈತ ಸಂಘ ಪ್ರತಿಭಟನೆ

21adarshkdga1 (1)
Published on

ಮಡಿಕೇರಿ: ಭೂ ಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಜಿಲ್ಲಾಧ್ಯಕ್ಷ ಚಿಮ್ಮಂಗಡ ಗಣೇಶ್ ಮಾತನಾಡಿ, ಕಾಯ್ದೆ ಜಾರಿಗೆ ಸಂಘದ ವಿರೋಧವಿದೆ. ಇದರಿಂದ ರೈತಾಪಿ ವರ್ಗಕ್ಕೆ ಘೋರ ಅನ್ಯಾಯವಾಗಿದ್ದು, ಸ್ವಾರ್ಥಕ್ಕಾಗಿ ಸರ್ಕಾರ ಅಧಿಕಾರವನ್ನು ಬಳಸಿಕೊಂಡಿದೆ. ಇವರ ನಡುವಳಿಕೆ ಖಂಡನಾರ್ಹ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ರೈತಪರ ಎಂದು ಭಾವಿಸಿದ್ದೆವು. ಆದರೆ ಈಗ ರೈತರ ಭೂಮಿ ಕಿತ್ತುಕೊಳ್ಳುವ ಮುಖ್ಯಮಂತ್ರಿ ಆಗಿದ್ದಾರೆ. ಈ ಕಾಯ್ದೆಯನ್ನು ಸರ್ಕಾರ ಕೂಡಲೇ ಹಿಂಪಡೆಯದೆ ಹೋದರೆ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಳ್ಳಿಚಂಡ ಧನು, ಖಜಾಂಚಿ ಚಂಗುಲಂಡ ರಾಜಪ್ಪ, ಸಂಚಾಲಕ ಮಹೇಶ್, ವಿರಾಜಪೇಟೆ ಹೋಬಳಿ ಅಧ್ಯಕ್ಷ ಚತಂಡ ಗಿರೀಶ್ ಸೋಮಯ್ಯ, ಕಾರ್ಯದರ್ಶಿ ಮುತ್ತು, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಚೆಪ್ಪುಡಿಮಾಡ ಮಹೇಶ್ ಹಾಗೂ ಪ್ರಮುಖರಾದ ಮಂಜು, ವಿನು, ಐಮಾಡ ಹ್ಯಾರಿ, ಕರಿನೆರವಂಡ ಜಿತನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net