ಹೋರಾಟ ಅಂತ್ಯಗೊಳಿಸಿದ ರೈತರು

mm 20-6
Published on

ವಿಜಯಪುರ:ಬೂದಿಹಾಳ&ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು 9 ದಿನಗಳಿಂದ ನಡೆಸುತ್ತಿದ್ದ ಅರ್ನಿದಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಿದರು.

ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಸಚಿವರು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ನಂತರ ಕೆಬಿಜೆಎನ್​ಎಲ್​ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನರಾಜ್​ ಅವರಿಗೆ ಕರೆ ಮಾಡಿದ ಸಚಿವ ಎಂ.ಬಿ. ಪಾಟೀಲ, ಸದರಿ ಯೋಜನೆಯ ಕುರಿತು ಮಾಹಿತಿ ಪಡೆದರು.

ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಈ ಯೋಜನೆ ನನ್ನ ಕನಸಿನ ಕೂಸು. ಈ ಹಿಂದೆ 2013&18 ರ ಅವಧಿಯಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಯೋಜನೆ ಕೈಗೊಳ್ಳಲಾಗಿತ್ತು. ಆದರೆ, ನೀರು ಹಂಚಿಕೆ ಸಮಸ್ಯೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿಗೆ ಹಿನ್ನಡೆ ಉಂಟಾಯಿತು ಎಂದರು.

ಈಗಲೂ ಕೂಡ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ.

ನಮ್ಮ ಕನಸಿನ ಈ ಮಹತ್ವದ ಯೋಜನೆಯನ್ನು ಮರುಜೀವಿತಗೊಳಿಸುವ ನಿಟ್ಟಿನಲ್ಲಿ ಮುಂದಿನ 3 ತಿಂಗಳೊಳಗೆ ಹೊಲಗಾಲುವೆ ನಿರ್ಮಿಸುವ ಜಮೀನುಗಳ ರೈತರ ಸಹಮತಿಯೊಂದಿಗೆ ಸಮಗ್ರ ಯೋಜನಾ ವರದಿ (ಡಿಪಿಆರ್​) ಪೂರ್ಣಗೊಳಿಸಲಾಗುವುದು.

4ನೇ ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ಹೊಲಗಾಲುವೆ ಕಾಮಗಾರಿ 9 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ವಿಜಯಪುರದಲ್ಲಿ ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯ ಕಾಮಗಾರಿ ಬಗ್ಗೆ ಅಧಿಕೃತವಾಗಿ ೂಷಣೆ ಮಾಡಲಾಗುವುದು.

ರೈತರ ಹಿತರಣೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಅವರ ಕನಸುಗಳನ್ನು ಸಾಕಾರಗೊಳಿಸಲು ನಾವು ಸದಾ ಬದ್ಧ ಎಂದರು.

ಆಲಮೇಲ ವಿರಕ್ತಮಠದ ಮಲ್ಲಿಬೊಮ್ಮಯ್ಯ ಸ್ವಾಮೀಜಿ ಮಾತನಾಡಿ, ಸಚಿವ ಎಂ.ಬಿ. ಪಾಟೀಲರು ನುಡಿದಂತೆ ನಡೆಯುತ್ತಿರುವ ಬಸವನಾಡಿನ ಭಗೀರಥ. ಸಿದ್ಧೇಶ್ವರ ಶ್ರೀಗಳು ಬೊಗಸೆ ನೀರು ಕೇಳಿದರೆ, ಅವರು ಕೊಡ ನೀರು ತಂದು ಕೊಟ್ಟಿದ್ದಾರೆ.

ಡಿಪಿಆರ್​ ಮಾಡುವಾಗ ಅಧಿಕಾರಿಗಳೊಂದಿಗೆ ರೈತರು ಸಹಕರಿಸಬೇಕು ಎಂದು ಹೇಳಿದರು.

ಸಚಿವರ ಭರವಸೆಗೆ ಒಪ್ಪಿದ ರೈತರು ಧರಣಿ ಸತ್ಯಾಗ್ರಹ ಹಿಂಪಡೆದರು.

ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ರೈತ ಮುಖಂಡರಾದ ಪ್ರಭುಗೌಡ ಲಿಂಗದಳ್ಳಿ, ಬಿ.ಎಸ್​. ಪಾಟೀಲ ಯಾಳಗಿ, ಸುಭಾಸ ಛಾಯಾಗೋಳ, ಅರವಿಂದ ಕುಲಕರ್ಣಿ, ಸುರೇಶಬಾಬು ಬಿರಾದಾರ, ಪ್ರಭು ಬಿರಾದಾರ, ಶಿವಪುತ್ರ ಚೌಧರಿ, ಕಾಶಿನಾಥ ತಳವಾರ ಮತ್ತಿತರರಿದ್ದರು.

ಬೂದಿಹಾಳ&ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಕೊಡಗಾನೂರಿನ ಬಳಿ ಧರಣಿನಿರತ ರೈತರೊಂದಿಗೆ ಸಚಿವ ಎಂ.ಬಿ. ಪಾಟೀಲ ಮಾತುಕತೆ ನಡೆಸಿದರು. ಅರವಿಂದ ಕುಲಕರ್ಣಿ, ಮಲ್ಲಿಬೊಮ್ಮಯ್ಯ ಸ್ವಾಮೀಜಿ ಮತ್ತಿತರರಿದ್ದಾರೆ,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net