

ಮೈಸೂರು: ಜಯನಗರದಲ್ಲಿರುವ ಶ್ರೀವಿವೇಕ ಬಾಲೋದ್ಯಾನ ಪಬ್ಲಿಕ್ ಶಾಲೆಯಲ್ಲಿ ಪುಟ್ಟ ಮಕ್ಕಳಿಗಾಗಿ ಪೇಪರ್ ಫ್ಯಾಷನ್ ಶೋ ಸ್ಪರ್ಧೆ ಆಯೋಜಿಸಲಾಗಿತ್ತು.
ಸುದ್ದಿ ಪತ್ರಿಕೆಗಳಿಂದ ತಯಾರಿಸಲಾದ ಉಡುಗೆ-ತೊಡುಗೆಗಳನ್ನು ತೊಟ್ಟು ಪುಟಾಣಿ ಮಕ್ಕಳು ಭಾಗವಹಿಸಿ ಪಾಲಕರನ್ನು ರಂಜಿಸಿದರು. ಪರಿಸರ ಸ್ನೇಹಿ, ಸೃಜನಶೀಲತೆ, ಆತ್ಮವಿಶ್ವಾಸ ಮೂಡಿಸುವ ಭಾಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮನ್ನು ತಾವು ಅಭಿವ್ಯಕ್ತಿಗೊಳಿಸಲು ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿತ್ತು. ಫ್ರೀ ಕೆ.ಜಿ ಯಿಂದ ಯು ಕೆ.ಜಿ ತರಗತಿವರೆಗಿನ ಮಕ್ಕಳು ಭಾಗವಹಿಸಿದ್ದರು.
ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ಎಸ್.ನಾಗೇಶ್ ಮಾತನಾಡಿ, ಚಿಕ ್ಕಮಕ್ಕಳಲ್ಲಿ ಸೌಂದರ್ಯ ಪ್ರಜ್ಞೆ ಮೂಡಿಸುವ ಈ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತೀರ್ಪುಗಾರರಾಗಿದ್ದ ಅಮೃತಾ ಪ್ರಕಾಶ್, ವಂದನಾ ವಿಜೇತರನ್ನು ಆಯ್ಕೆ ಮಾಡಿದರು. ಶಾಲೆಯ ಮುಖ್ಯ ಆಡಳಿತ ಅಧಿಕಾರಿ ಭವಾನಿ ನಾಗೇಶ್, ಪ್ರಾಂಶುಪಾಲೆ ಎಚ್.ಎಂ.ಸುಮಾ, ಬೋಧಕ, ಬೋಧಕೇತರ ಇದ್ದರು.