ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶರವೇಗ

ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶರವೇಗ
Published on

ಗೋಣಿಕೊಪ್ಪ: ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ನಡೆಯುತ್ತಿವೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

2.51 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯನ್ನು ಕಾಕೋಟುಪರಂಬು ಬಳಿ ಮಂಗಳವಾರ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ ಮಾತನಾಡಿದರು.

ಕಾಮಗಾರಿ ಗುಣಮಟ್ಟ ಕಾಪಾಡಿಕೊಂಡಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ರೀತಿಯಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ನಾಗರಿಕರಿಗೆ ಉತ್ತಮ ಸೌಲಭ್ಯ ಒದಗಿಸುವುದು ಜನಪ್ರತಿನಿಧಿಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಮುಂದೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿ ಕೊಳ್ಳಲಾಗುವುದು ಎಂದರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಕೋಟು ಪರಂಬು ವಲಯ ಅಧ್ಯಕ್ಷ ಮಂಡೇಟಿರ ಅನಿಲ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಟ್ಟಕಾಳಂಡ ಕಾಮಿ, ತೋರೆರ ಪೊನ್ನಕ್ಕಿ, ಮೇವಡ ಚಿಣ್ಣಪ್ಪ, ಪೊಕ್ಕುಳಂಡ್ರ ರಮೇಶ್, ರಾಫಿ, ಮತೀನ್, ನಾಸೀರ್, ಚೋಕಿಂ, ಲಿಂಗರಾಜ್, ರಮಣಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net