

ಮಂಡ್ಯ: ನಗರದ ಉದಯಗಿರಿ ಬಡಾವಣೆಯಲ್ಲಿ ಐವರ ಗುಂಪೊಂದು ಯುವಕನ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (26) ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನ ಮೇಲೆ ವರ್ಧನ್, ವರುಣ್, ಮನು, ಗೋವಿಂದರಾಜು, ಮದನ್ ಎಂಬುವರು ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ. ಕಿರಣ್ ಮತ್ತು ವರ್ಧನ್ ಇಬ್ಬರೂ ನಗರದಲ್ಲಿ ತಳ್ಳುವ ಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆಗುತ್ತಿತ್ತು ಎನ್ನಲಾಗಿದೆ.
ಇನು ಕಿರಣ್ ಇತ್ತೀಚೆಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದ. ಕಳೆದ ಹದಿನೈದು ದಿನ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಇದಾದ ಬಳಿಕ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗೋಡೌನ್‌ನಲ್ಲಿ ಮಲಗಿದ್ದ ಕಿರಣ್ ಮೇಲೆ ವರ್ಧನ್ ಮತ್ತು ಇತರರು ಮಚ್ಚು, ಲಾಂಗ್‌ನಿಂದ ತಲೆ, ಕೈ, ಕಾಲು ಇತರ ಕಡೆಗಳಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ತೀವ್ರವಾಗಿಗೊಂಡು ಗೋಡೌನ್‌ನಲ್ಲೇ ಕುಸಿದು ಬಿದ್ದಿದ್ದ ಕಿರಣ್‌ನನ್ನು ಸ್ನೇಹಿತರು ನೋಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚುವರಿ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.