ಮಾರಣಾಂತಿಕ ಹಲ್ಲೆ, ಓರ್ವ ಸಾವು

Death 28 June 20
Published on

ಕೊಕಟನೂರ: ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಅಥಣಿ ತಾಲೂಕಿನ ಯಲ್ಲಮ್ಮನವಾಡಿ ಗ್ರಾಮದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಗ್ರಾಮದ ಅಪ್ಪಾಸಾಬ ರಾಮು ಕೋಳಿ (55) ಮೃತ ವ್ಯಕ್ತಿ. ಯಲ್ಲಮ್ಮನವಾಡಿ ಗ್ರಾಮದ ಪ್ರವಾಸಿ ತಾಣದಲ್ಲಿ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಸಾಬ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net