ಕೆರೆಯ ನೀರಿಗೆ ಬಲಿಯಾದ ತಂದೆ ಮಗಳು, ಗ್ರಾಮದಲ್ಲಿ ನೀರವ ಮೌನ

crime1-2.jpg
Published on

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಶೆಟ್ಟಹಳ್ಳಿ ಕೆರೆಯ ನೀರಿನಲ್ಲಿ ಮುಳುಗಿ ತಂದೆ ಮಗಳು ಮುಳುಗಿ ಮೃತಪಟ್ಟಿದ್ದಾರೆ.
ಶೆಟ್ಟಹಳ್ಳಿ ಗ್ರಾಮದ ರೈತ ನಾಗೇಶ್(೪೮) ಹಾಗೂ ಮಗಳು ಧನುಶ್ರೀ(೧೩) ಮೃತಪಟ್ಟವರು. ಮಗಳನ್ನು ರಕ್ಷಿಸಲು ಹೋಗಿ ತಂದೆ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ನಾಗೇಶ್ ಮಗಳನ್ನು ಕರೆದುಕೊಂಡು ತೋಟಕ್ಕೆ ಹೋಗಿದ್ದು ಸಂಜೆ ವಾಪಸ್ ಬರುವಾಗ ದಾರಿ ಸಮೀಪವಿದ್ದ ಕೆರೆಯಲ್ಲಿ ಕೈ ಕಾಲು ತೊಳೆಯಲು ಧನುಶ್ರೀ ನೀರಿಗೆ ಇಳಿದಿದ್ದು ಇದೇ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ತಕ್ಷಣ ಮಗಳನ್ನು ರಕ್ಷಿಸಲು ನೀರಿಗೆ ಇಳಿದ ಅಪ್ಪನು ಕೂಡ ಆಯ ತಪ್ಪಿ ಮಗಳೊಂದಿಗೆ ನೀರು ಪಾಲಾಗಿದ್ದಾನೆ. ಮೃತ ನಾಗೇಶ್‌ನ ಪುತ್ರ ನೀಡಿದ ದೂರಿನಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದ್ದು ಸಂಬAಧಿಕರು ಸಮಾಧಾನಪಡಿಸಿದರು. ದುರ್ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಅಪ್ಪ ಮಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.  
ಮಾಹಿತಿ ತಿಳಿದು ಶಾಸಕ ಬಿ.ಎನ್.ರವಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಸಂತೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net