ಸ್ಕೂಟರ್​-ಲಾರಿ ಡಿಕ್ಕಿ: ತಂದೆ-ತಂಗಿಯೊಂದಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

death
ಸಾಂದರ್ಭಿಕ ಚಿತ್ರ
Published on

ಚಾಮರಾಜನಗರ: ತಂದೆ ಹಾಗೂ ತಂಗಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿ, ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕು ಆಸ್ಪತ್ರೆ ಮುಂದೆ ಈ ಅಪಘಾತ ಸಂಭವಿಸಿದೆ.

ಪ್ರಿಯಾ ಸ್ಥಳದಲ್ಲೇ ಸಾವಿಗೀಡಾಗಿರುವ ವಿದ್ಯಾರ್ಥಿನಿ. ತಂದೆ ರಾಜು ಹಾಗೂ ಇನ್ನೊಬ್ಬ ಮಗಳು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜು ತಮ್ಮ ಇಬ್ಬರು ಮಕ್ಕಳನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಉಂಟಾಗಿದೆ. ಗುಂಡ್ಲುಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net