ಫಯಾಜ್ 14 ದಿನ ನ್ಯಾಯಾಂಗ ವಶಕ್ಕೆ

court
Published on

ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿತ ಫಯಾಜ್‌ನನ್ನು ಸಿಐಡಿ ಪೊಲೀಸರು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮತ್ತೇ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯಾದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣದ ಗಂಭೀರತೆ ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಆರೋಪಿ ಫಯಾಜ್‌ನನ್ನು ಕೋರ್ಟ್ ಅನುಮತಿ ಮೇರೆಗೆ 6 ದಿನ ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ಮಂಗಳವಾರಕ್ಕೆ ಆರು ದಿನ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮರಳಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net