

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜು. 23ಕ್ಕೆ ಮುಂದೂಡಿದೆ.
ಮೃತ ನೇಹಾ ಹಿರೇಮಠ ಅವರ ತಾಯಿ ಗೀತಾ ನಿರಂಜನ ಹಿರೇಮಠ ಫಿರ್ಯಾದಿದಾರರು ಆಗಿದ್ದರು. ಸುಪ್ರೀಂಕೋರ್ಟ್ ಆದೇಶದ ಸೆಕ್ಷನ್‌ಗಳ ಪ್ರಕಾರ ಫಿರ್ಯಾದಿದಾರರ ಪರ ವಕಾಲತ್ತು ಮಾಡಲು ಅವಕಾಶವಿದೆ ಎಂದು ನೇಹ ಪರ ವಕೀಲ ರಾಘವೇಂದ್ರ ಮುತಗೀಕರ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ವಕೀಲರಾದ ಗುರು ಹಿರೇಮಠ, ಅಶೋಕ ಅಣವೇಕರ ಅವರ ಸಲಹೆ ಸ್ವೀಕರಿಸಲು ಅವಕಾಶ ನೀಡುವಂತೆ ಕೋರಿದ್ದರು. ಇದಕ್ಕೆ ಫಯಾಜ್ ಪರ ವಕೀಲ ಝಡ್ ಎಂ. ಹಕ್ಕರಗಿ ತಕರಾರರು ಅರ್ಜಿ ಸಲ್ಲಿಸುವುದಾಗಿ ವಿವರಿಸಿದರು. ಆರೋಪಿ ಪರ ವಕೀಲರಿಗೆ ತಕರಾರರು ಸಲ್ಲಿಸಲು ಅವಕಾಶ ಕಲ್ಪಿಸಿ ನ್ಯಾಯಾಲಯವು ವಿಚಾರಣೆಯನ್ನು 23ಕ್ಕೆ ಮುಂದೂಡಿದೆ.