ಪಾಜಿಲ್ ಹತ್ಯೆ ಎಸಿಪಿ ಮಹೇಶ್ ಕುಮಾರ್ ಗೆ ತನಿಖೆ ಹೊಣೆ

IMG-20220731-WA0008
Published on

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಜು.28ರಂದು ನಡೆದ ಫಾಜಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್‌ ಕುಮಾರ್‌ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಕೊಲೆಯಾದ ಫಾಜಿಲ್‌ ಕುಟುಂಬಸ್ಥರು ಪೊಲೀಸ್‌ ಕಮೀಷನರ್‌ಗೆ ಲಿಖಿತ ಮನವಿ ಮಾಡಿದ ಹಿನ್ನೆಲೆ ಎಸಿಪಿ ಮಹೇಶ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net