

ಮಂಗಳೂರು: ಸುರತ್ಕಲ್‌ನಲ್ಲಿ ಜು.28ರಂದು ನಡೆದಿದ್ದ ಮುಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್ ಬಂಟ್ವಾಳ (28) ಎಂಬಾತನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿಗಳು ಕೃತ್ಯ ಎಸಗಲು ಬಳಸಿದ ಕಾರನ್ನು ಕಾರ್ಕಳದ ಬಳಿ ಬಿಟ್ಟಿದ್ದರು. ಅಲ್ಲಿಂದ ಹರ್ಷಿತ್ ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಿದ್ದ. ಪ್ರಕರಣದಲ್ಲಿ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದೆ. ಇದೀಗ ಬಂಧಿತರ ಒಟ್ಟು ಸಂಖ್ಯೆ ಏಳಕ್ಕೆ ಏರಿದೆ.