ಲೋಕಾಯುಕ್ತರ ಬಲೆಗೆ ಎಫ್‌ಡಿಎ

Lokayukta Raid
Published on

ಶಿರಹಟ್ಟಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಎಸ್.ಎಸ್. ಚೌತಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಮುಖ್ಯಶಿಕ್ಷಕ ಎಸ್.ಬಿ. ಲಕ್ಷೇಶ್ವರ ಅವರ ಸೇವಾ ಪುಸ್ತಕವನ್ನು ಬೆಂಗಳೂರಿನ ಮಹಾಲೇಖಪಾಲಕರ ಕಚೇರಿಗೆ ರವಾನಿಸಲು 4,000 ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಉಪಾಧೀಕ್ಷಕ ವಿಜಯ್ ಬಿರಾದಾರ ಹಾಗೂ ನಿರೀಕ್ಷಕಿ ಎಸ್.ಎಸ್. ತೇಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net