ಸೇತುವೆಯಲ್ಲಿ ಬಿರುಕು, ಮುರಿದು ಬೀಳುವ ಆತಂಕ; ಸಾವಿರಾರು ವಾಹನಗಳು ಸಂಚರಿಸುವ ಸಂಪರ್ಕ ಮಾರ್ಗವೇ ಬಂದ್​

Untitled-2
Published on

ವಿಜಯಪುರ: ರಾಜಧಾನಿ ಬೆಂಗಳೂರಿನಲ್ಲಿ ವಾಲಿದ್ದ ಮೂರಂತಸ್ತಿನ ಕಟ್ಟಡವೊಂದು ಕುಸಿದು ನೆಲಸಮಗೊಂಡ ಬೆನ್ನಿಗೇ ರಾಜ್ಯದ ಮತ್ತೊಂದೆಡೆ ಸೇತುವೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಅದು ಮುರಿದು ಬೀಳುವ ಸಾಧ್ಯತೆ ಇರುವುದರಿಂದ ಆತಂಕವೂ ಸೃಷ್ಟಿಯಾಗಿದೆ.

ವಿಜಯಪುರ ಜಿಲ್ಲೆ ಮಿಣಜಗಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ-61ರಲ್ಲಿ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಈ ಬಿರುಕು ಕಂಡುಬಂದಿದೆ. ಬಿರುಕು ಬಿಟ್ಟ ಕಾರಣ ಸೇತುವೆ ಬೆಂಡಾಗಿದ್ದು, ಕುಸಿದು ಬೀಳುವ ಆತಂಕ ಉಂಟಾಗಿದೆ.

ಪರಿಣಾಮವಾಗಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ವಿಜಯಪುರ, ತಾಳಿಕೋಟೆ, ಮುದ್ದೇಬಿಹಾಳ ಸಂಪರ್ಕ ಬಂದ್ ಆಗಿದೆ. ಅಗತ್ಯವಾದರೆ ದೇವರಹಿಪ್ಪರಗಿ ಪಟ್ಟಣದ ಮೂಲಕ ಸುತ್ತು ಹಾಕಿ ಹೋಗುವ ಅನಿವಾರ್ಯತೆ ಉಂಟಾಗಿದೆ.

ಸಾಮಾನ್ಯವಾಗಿ ಈ ಹೆದ್ದಾರಿಯಲ್ಲಿ ನಿತ್ಯ 20 ಸಾವಿರಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ಸ್ಥಳಕ್ಕೆ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net