

ಮಂಗಳೂರು: ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರ, ರೌಡಿಶೀಟರ್ ಆಕಾಶಭವನ ಶರಣ್‌ಗೆ ಇದೀಗ ಎನ್‌ಕೌಂಟರ್ ಭೀತಿ ಆರಂಭವಾಗಿದ್ದು, ನ್ಯಾಯಾಧೀಶರಿಗೆ ಪತ್ರ ಬರೆದು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಬೇಕು ಎಂದು ಪತ್ರ ಮೂಲಕ ಮನವಿ ಮಾಡಿದ್ದಾನೆ.
ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಶರಣ್ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈತನನ್ನು ಬಂಟ್ವಾಳದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆದು ಬಂಟ್ವಾಳ ಪೊಲೀಸರು ವಿಚಾರಣೆಗೆ ಕರೆ ತರಲಿದ್ದಾರೆ. ಈ ಸಂದರ್ಭ ಪೊಲೀಸರು ಎನ್‌ಕೌಂಟರ್ ಮಾಡುತ್ತಾರೆ ಎಂದು ಶರಣ್ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ. ತನ್ನ ಜೀವಕ್ಕೆ ಅಪಾಯವಿದೆ. ವಿಚಾರಣೆಯಿಂದ ವಿನಾಯಿತಿ ಕೋರಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್‌ನಿಂದ ಪತ್ರದಲ್ಲಿ ಮನವಿ ಮಾಡಿದ್ದಾನೆ.