ಡ್ರಗ್ಸ್ ಪ್ರಕರಣದಲ್ಲಿ ಪಂಜಾಬ್ ಮೀರಿಸುವ ಆತಂಕ

Joshi New 9696
Published on

ಹುಬ್ಬಳ್ಳಿ : ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಹೆಚ್ಚು ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿರುವುದೇ ಇದಕ್ಕೆ ನಿದರ್ಶನ ಎಂದು ಹೇಳಿದರು.

ಡ್ರಗ್ಸ್ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತೀರ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿ, ಇಲ್ಲಿ ಡ್ರಗ್ಸ್ ಮಾಫಿಯಾ ತಲೆ ಎತ್ತುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅವಕಾಶ ಬೇಡ. ಯುವ ಸಮೂಹ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ಪೊಲೀಸರು ಪ್ರತಿ ಎರಡು ತಾಸಿಗೊಮ್ಮೆ ಡ್ರಿಲ್ ಮಾಡಬೇಕೆಂದು ಆದೇಶ ಹೊರಡಿಸಿದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಪ್ರಲ್ಹಾದ ಜೋಶಿ, ಮೊದಲೇ ರಾಜ್ಯದಲ್ಲಿ ಪೊಲೀಸರ ಸಂಖ್ಯೆ ಕಡಿಮೆ ಇದೆ. ಪೊಲೀಸರಿಗೆ ಡ್ರಿಲ್ ಮಾಡುವ ಬದಲು, ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಡ್ರಿಲ್ ಮಾಡಬೇಕು ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net