ಮೈಸೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಪಂದನ ಸಾಂಸ್ಕೃತಿಕ ಪರಿಷತ್ತು, ಕದಂಬ ಕಲಾಪೀಠ ಹಾಗೂ ಉದಯಗಿರಿ ಕನ್ನಡ ಸಂಘದಿಂದ ಫೆ.10 ’ಈಡಿಗ ಜನಾಂಗದ ಮರೆಯಲಾಗದ ಮಹನೀಯರು’ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ.
ನಗರದ ಮುಡಾ ಪಕ್ಕದಲ್ಲಿರುವ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆಯಲ್ಲಿ ಅಂದು ಸಂಜೆ 5ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸುಜಯ್ ಸುರೇಶ್ ಸಂಪಾದಕತ್ವದ ಪುಸ್ತಕ ಬಿಡುಗಡೆಗೊಳ್ಳಲಿದೆ.
ಪಂಪ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪದ್ಮಾ ಶೇಖರ್ ಪುಸ್ತಕ ಕುರಿತು ಮಾತನಾಡುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಚ್.ಕೆ. ಪಾಂಡು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಸಂಪಾದಕ ಸುಜಯ್ ಸುರೇಶ್, ಕದಂಬ ಕಲಾಪೀಠದ ಅಧ್ಯಕ್ಷ ಬಿ.ವಿದ್ಯಾಸಾಗರ ಕದಂಬ ಭಾಗಹಿಸುವರು ಎಂದು ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಹೇಳಿಕೆೆಯಲ್ಲಿ ತಿಳಿಸಿದ್ದಾರೆ.