

ನರಗುಂದ: ಶಿಶು ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗುರುವಾರ ಪೋಷಣ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ಪೋಷಣ ಅಭಿಯಾನ ಕಾರ್ಯಕ್ರಮ ಸಂಯೋಜಕ ಮಂಜುನಾಥ ಗುಗ್ಗರಿ ಮಾತನಾಡಿ, ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರದ ಜತೆಗೆ ಆಟೋಟಕ್ಕೆ ಉತ್ತೇಜನ ನೀಡಬೇಕು ಎಂದರು.
ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣ ಹಡಪದ ಮಾತನಾಡಿ, ಸೆಪ್ಟೆಂಬರ್ ತಿಂಗಳಾದ್ಯಂತ ನಡೆಯುವ ಪೋಷಣ ಅಭಿಯಾನವು ವಿವಿಧ ಪೌಷ್ಠಿಕಾಂಶವನ್ನು ಹೆಚ್ಚಿಸುವ ಕಾರ್ಯಕ್ರಮವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಮರಿಯಣ್ಣವರ ಕಾರ್ಯಕ್ರಮ ಉದ್ಘಾಟಿಸಿದರು. ಉಪಾದ್ಯಕ್ಷೆ ಈರವ್ವ ಮುದಿಗೌಡ್ರ, ಶಂಕ್ರಮ್ಮ ಚೆಲವಾದಿ, ನಿರ್ಮಲಾ ತಳವಾರ, ಶೋಭಾ ಕೋನನ್ನವರ, ಶ್ರುತಿ ಬ್ಯಾಳಿ, ಗ್ರಾಪಂ ಮಾಜಿ ಅಧ್ಯಕ್ಷ ಮುತ್ತುರೆಡ್ಡಿ ರಾಯರೆಡ್ಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಹನಾ ಪಿಳ್ಳೆ, ಬಸವರಾಜ ಹಿರೇಮಠ ಇತರರಿದ್ದರು.