ಮಕ್ಕಳಿಗೆ ಉತ್ತಮ ಆಹಾರ ಕೊಡಿ

ac santosh
ತೇರದಾಳದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಎಸಿ ಸಂತೋಷ ಕಾಮಗೌಡ ಭೇಟಿ ನೀಡಿ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ನಿಲಯ ಪಾಲಕ ಎಸ್.ಜಿ. ಹಿರೇಮಠ, ಉಪತಹಸೀಲ್ದಾರ್ ಶ್ರೀಕಾಂತ ಮಾಯನ್ನವರ ಇದ್ದರು.
Published on

ತೇರದಾಳ: ಉತ್ತಮ ಆಹಾರ ಹಾಗೂ ಸ್ವಚ್ಛ ಪರಿಸರ ಅಧ್ಯಯನ ಮಾಡಲು ಅನುಕೂಲಕರವಾಗಿರುತ್ತವೆ. ಇವುಗಳನ್ನು ಪ್ರತಿ ವಿದ್ಯಾರ್ಥಿ ನಿಲಯಗಳಲ್ಲಿ ಇರುವಂತೆ ನೋಡಿಕೊಳ್ಳಿ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಹೇಳಿದರು.

ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಶನಿವಾರ ಅನಿರೀಕ್ಷಿತ ಭೇಟಿ ನೀಡಿದ ನಂತರ ಅಲ್ಲಿನ ಸಿಬ್ಬಂದಿಗೆ ತಾಕೀತು ಮಾಡಿದರು.

ಮಕ್ಕಳಿಗೆ ಅವಶ್ಯವಿರುವಷ್ಟು ಶೌಚಗೃಹ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನಿಲಯದ ಮೇಲಿರುವ ತಗಡಿನ ಶೀಟ್‌ನಿಂದ ಮಕ್ಕಳಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಇಲಾಖೆ ಅಧಿಕಾರಿಗಳ ಸಲಹೆ ಪಡೆದು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದ ಈ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಲಿತಾಂಶ ಹೆಚ್ಚಳಕ್ಕೆ ಇನ್ನಷ್ಟು ಕ್ರಮ ತೆಗೆದುಕೊಳ್ಳಲು ಸೂಚಿಸಿದರು. ಆಹಾರ ಪದಾರ್ಥಗಳನ್ನು ಪರಿಶೀಲಿಸಿದರಲ್ಲದೆ ಮಕ್ಕಳೊಂದಿಗೆ ಮಾತನಾಡಿ ಸಮಸ್ಯೆ ಆಲಿಸಿದರು.

ತಹಸೀಲ್ದಾರ್ ಗಿರೀಶ ಸ್ವಾದಿ, ಉಪತಹಸೀಲ್ದಾರ್ ಎಸ್.ಬಿ. ಮಾಯನ್ನವರ, ನಿಲಯ ಪಾಲಕ ಎಸ್.ಜಿ. ಹಿರೇಮಠ, ಗ್ರಾಮ ಆಡಳಿತಾಧಿಕಾರಿ ರೇವಣಸಿದ್ದ ಕಾಮತೆ, ಪುರಸಭೆ ಮುಖ್ಯಾಧಿಕಾರಿ ಆನಂದ ಕೆಸರಗೊಪ್ಪ, ಕಂದಾಯ ಇಲಾಖೆ ಸಿಬ್ಬಂದಿ ಶ್ರೀಶೈಲ ಮಧರಖಂಡಿ, ಮಹಾದೇವ ಯಲ್ಲಟ್ಟಿ, ನಿಲಯ ಸಿಬ್ಬಂದಿ ಪಿ.ಡಿ. ಧರೆನ್ನವರ, ಎಂ.ಬಿ. ಗೌಡರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net