ಕಾಂಗ್ರೆಸ್ ಮುಖಂಡರಿಂದ ಉಸ್ತುವಾರಿ ಸಚಿವರಿಗೆ ಸ್ವಾಗತ

IMG-20231011-WA0081
Published on

ಹೊಳೆನರಸೀಪುರ: ಪಟ್ಟಣದ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಸ್ವಾಗತಿಸಿದರು.


ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ ಎಂದಷ್ಟೇ ಹೇಳಿದರು. ನಂತರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರಳಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ, ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು, ಬಸವರಾಜು, ಮಹೇಶ್, ರಂಗಸ್ವಾಮಿ, ಬಾಬು, ಲೋಕೇಶ್, ಮಂಜೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net