ಪತ್ರಿಕೆ ಇಂದಿಗೂ ಪ್ರಬಲ ಮಾಧ್ಯಮ: ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ ಹೇಳಿಕೆ

Felicitation Ceremony Mandya
Published on

ಮಂಡ್ಯ: ಪತ್ರಿಕೆ ಎಂಬದು ಇಂದಿಗೂ ಪ್ರಬಲ ಮಾಧ್ಯಮವಾಗಿದೆ. ದೃಶ್ಯ ಮಾಧ್ಯಮದ ನಡುವೆಯೂ ಪತ್ರಿಕೆ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡಿದೆ. ಪತ್ರಿಕೆಯಲ್ಲಿ ಸುದ್ದಿ ಬಂದೊಡನೆ ಸತ್ಯವೆಂದು ನಂಬುವವರು ಇಂದಿಗೂ ನಮ್ಮ ನಡುವೆಯಿದ್ದಾರೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ ಹೇಳಿದರು.

ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪತ್ರಿಕಾ ಮಿತ್ರರು ಹಾಗೂ ಹಿತೈಷಿಗಳ ಬಳಗದ ವತಿಯಿಂದ ಕೆ.ಕೆ.ಶೆಟ್ಟಿ ಕುತ್ತಿಕಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮತ್ತೀಕೆರೆ ಜಯರಾಂ ಹಾಗೂ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಸವರಾಜ ಹೆಗ್ಗಡೆ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೃಶ್ಯ ಅಥವಾ ಪತ್ರಿಕೆ ಮಾಧ್ಯಮವನ್ನು ಯಾರು ಕಡೆಗಣಿಸಲು ಸಾಧ್ಯವಿಲ್ಲ. ಪ್ರಬಲವಾದ ಮಾಧ್ಯಮದ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದರು.

ಸಾನಿಧ್ಯ ವಹಿಸಿದ್ದ ಕೆಂಗೇರಿ ವಿಶ್ವ ಒಕ್ಕಲಿಗ ಮಠದ ಉತ್ತರಾಧಿಕಾರಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಅವಿರತ ಕಷ್ಟಗಳನ್ನು ಅನುಭವಿಸಿ ಸಮಾಜಕ್ಕೆ ಕೊಡುಗೆಯನ್ನು ನೀಡಿದಾಗ ಜನರು ಪತ್ರಕರ್ತರನ್ನು ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಪತ್ರಕರ್ತರು ಜನಸಾಮಾನ್ಯರ ನಡುವಿನಲ್ಲಿದ್ದು, ಸಮಸ್ಯೆ ಅರಿತವರಾಗಿರುತ್ತಾರೆ. ಕಷ್ಟದಲ್ಲಿರುವ ಪತ್ರಕರ್ತರಿಗೆ ಬೇಕಾದ ಸವಲತ್ತುಗಳನ್ನು ಒದಗಿಸುವಂತಹ ಹಿರಿಯ ಪತ್ರಕರ್ತರ ಕಾರ್ಯ ವೈಖರಿ ಯುವ ಪತ್ರಕರ್ತರಿಗೆ ಶಕ್ತಿಯನ್ನು ತುಂಬುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್ ಮತ್ತು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ ಮಾತನಾಡಿದರು. ಅಭಿನಂದಿತರ ಕುರಿತು ಪತ್ರಕರ್ತ ಕೆ.ಎನ್.ರವಿ ಮಾತನಾಡಿದರು.

ಆಯೋಜಕರಾದ ಶಶಿಧರ್, ಕೆ.ಶ್ರೀನಿವಾಸ್, ಶಿವನಂಜಯ್ಯ, ಎಂ.ಎಸ್.ಶಿವಪ್ರಕಾಶ್, ಎನ್.ನಾಗೇಶ್, ರವಿ ಸಾವಂದಿಪುರ, ಸಿ.ಎ.ಲೋಕೇಶ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್, ಮಾಜಿ ಅಧ್ಯಕ್ಷ ಬಿ.ಪಿ.ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net