ಪ್ರತಿಭಾ ಪುರಸ್ಕಾರ 25ರಂದು

Published on

ಹುಬ್ಬಳ್ಳಿ: ನಗರದ ಬಣಗಾರ ಸಮಾಜದ ವತಿಯಿಂದ ಮೇ 25ರಂದು ಬೆಳಗ್ಗೆ 10ಗಂಟೆಗೆ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್ ಬಯೋಟೆಕ್ ಆಡಿಟೋರಿಯಂನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

2024-25ನೇ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾಜದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜದ ಅಧ್ಯಕ್ಷ ಅನೀಲ ಕವಿಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಜೋಡಳ್ಳಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net