ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ರೋವರ್ಸ್ ಹಾಗೂ ರೇಂಜರ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ವಿದ್ಯಾರ್ಥಿಗಳಾದ ದೀಪಕ್, ಚರಣ್ ಹಾಗೂ ರೇಂಜರ್ಸ್ ವಿದ್ಯಾರ್ಥಿಗಳಾದ ಅರ್ಪಿತಾ ಹೆಚ್ ಶೆಟ್ಟಿ, ಅಶ್ವಿತಾ ಎಚ್.ಶೆಟ್ಟಿ, ಕಾವ್ಯಶ್ರೀ, ಅನನ್ಯ, ನೀಶಾ, ಶ್ರೇಜಾ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಯದುಪತಿ ಗೌಡ ಅವರು ಅಭಿನಂದಿಸಿದರು.