ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ

mng-sep24-scdcc2
Published on

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ಅಗ್ರಮಾನ್ಯ ನಾಯಕ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಹಿನ್ನೆಲೆಯಲ್ಲಿ ಸಮಸ್ತ ಸಹಕಾರಿ ಬಂಧುಗಳ ಪರವಾಗಿ ಅಭಿನಂದನಾ ಸಮಾರಂಭ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ .ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಎಂ.ಎನ್.ರಾಜೇಂದ್ರ ಕುಮಾರ್ - ಅರುಣಾ ರಾಜೇಂದ್ರಕುಮಾರ್ ದಂಪತಿಯನ್ನು ಅಭಿನಂದಿಸಲಾಯಿತು.
ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಶಾಸಕ ವೇದವ್ಯಾಸ ಕಾಮತ್ , ಸೌತ್ ಇಂಡಿಯಾ ಅದಾನಿ ಗ್ರೂಪ್ಸ್ ಅಧ್ಯಕ್ಷ ಕಿಶೋರ್ ಆಳ್ವ , ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮುಖ್ಯ ಅತಿಥಿಗಳಾಗಿದ್ದರು. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ, ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮುಂತಾದವರು ಉಪಸ್ಥಿತರಿದ್ದರು.
…………………………….

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net