ಪಂ. ಎಂ. ವೆಂಕಟೇಶಕುಮಾರಗೆ ಸನ್ಮಾನ

web 1
Published on

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ 134ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಗಾಯಕ ಪದ್ಮಶ್ರೀ ಎಂ. ವೆಂಕಟೇಶಕುಮಾರ ಅವರನ್ನು ಭಾನುವಾರ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಅವರು ಸನ್ಮಾನಿಸಿದರು.
ಸಂಘದ ಸಹ ಕಾರ್ಯದರ್ಶಿ ಶಂಕರ ಕುಂಬಿ ಸನ್ಮಾನಿತರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇವೇಳೆ ‘ಕನ್ನಡ ನಾಡಿನ ಕವಿ ಶ್ರೇಷ್ಠರು’ ಕೃತಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಬಿಡುಗಡೆಗೊಳಿಸಿದರು.
ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷತೆ ಪ್ರೊ. ಮಾಲತಿ ಪಟ್ಟಣಶೆಟ್ಟಿ, ಪದಾಧಿಕಾರಿಗಳಾದ ಶಂಕರ ಹಲಗತ್ತಿ, ವಿಶ್ವೇಶ್ವರಿ ಹಿರೇಮಠ, ಗುರು ಹಿರೇಮಠ, ಶಿವಾನಂದ ಭಾವಿಕಟ್ಟಿ, ಡಾ. ಡಿ.ಜಿ. ಹಾಜವಗೋಳ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net