ಬಿಆರ್‌ಟಿ ಅರಣ್ಯದಲ್ಲಿ ಹೆಣ್ಣಾನೆ ಸಾವು

24 yelandur 01
Published on

ಯಳಂದೂರು: ತಾಲೂಕಿನ ಪ್ರಸಿದ್ಧ ಗಿರಿಧಾಮ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯದಲ್ಲಿ ಶನಿವಾರ ಹೆಣ್ಣಾನೆಯೊಂದು ಮೃತಪಟ್ಟಿದೆ.

ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಕೆಂಕೆರೆ ಸಮೀಪದಲ್ಲಿ ಆನೆಯ ಕಳೇಬರವನ್ನು ಬಾಳೆಬರೆ ಗಸ್ತಿನಲ್ಲಿದ್ದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಈ ಆನೆಯು 2ರಿಂದ 3 ವರ್ಷದ ಪ್ರಾಯದಾಗಿದ್ದು, ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕಿ ದೀಪಾ ಜೆ.ಕಂಟ್ರಾಕ್ಟರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದಗೋಪಾಲ್ ಸಮ್ಮುಖದಲ್ಲಿ ಲ್ಯಾಂಪ್ ಸೊಸೈಟಿಯ ಉಪಾಧ್ಯಕ್ಷ ಸಿ.ಮಾದೇಗೌಡ, ವೈಲ್ಡ್ ಲೈಫ್ ಟ್ರಸ್ಟ್ ಆಫ್ ಕರ್ನಾಟಕದ ಕಾರ್ಯದರ್ಶಿ ಮನೋಜ್‌ಕುಮಾರ್, ವಲಯ ಅರಣ್ಯಾಧಿಕಾರಿಗಳು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪಶು ವೈದ್ಯಾಧಿಕಾರಿ ಮಿರ್ಜಾ ವಾಸಿಂ ಅವರು ಹೆಣ್ಣು ಆನೆಯ ಕಳೇಬರವನ್ನು ಶನಿವಾರ ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಿ, ಇದು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಖಾತ್ರಿ ಪಡಿಸಿ ಅಂತ್ಯಕ್ರಿಯೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net