ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿ ಮಂಗಳೂರಿಗೆ

sini- 1
Published on

ಮಂಗಳೂರು: ಉಡುಪಿ ಮೂಲದ 2022 ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿ ಪ್ರಶಸ್ತಿ ಗೆದ್ದ ಬಳಿಕ ಸೋಮವಾರ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು.


ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬದುಕಿಗೆ ತಿರುವು ಕೊಡುವಂತಹ ಉತ್ತಮ ಕತೆ ದೊರೆತರೆ ಸಿನಿಮಾಗಳಲ್ಲಿ ಕೂಡ ಅಭಿನಯಿಸುವೆ ಎಂದು ಹೇಳಿದರು.
ಮಂಗಳೂರಿನಲ್ಲಿ ತನಗೆ ದೊರೆತ ಉತ್ತಮ ರೀತಿಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ತಿಳಿಸಿದರು.


ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಕುಟುಂಬ ಸದಸ್ಯರ ಜೊತೆ ಕಟೀಲು ಕ್ಷೇತ್ರಕ್ಕೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net