ಅಧಿಕೃತ ರಸಗೊಬ್ಬರ ಮಾರಾಟ ಮಾಡುವಂತಿಲ್ಲ

gobbara
Published on

ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯಲ್ಲಿ ಮಾತನಾಡಿದರು. ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂಆರ್‌ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

14213 ಮೆಟ್ರಿಕ್ ಟನ್ ದಾಸ್ತಾನು:

ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ ಮಾತನಾಡಿ ಮುಂಗಾರು 2025- ರ ಹಂಗಾಮಿಗೆ 31799 ಮೆಟ್ರಿಕ್ ಟನ್‌ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್‌ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net