

ಅರಕಲಗೂಡು: ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆಧುನಿಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳಲು ಇಂಗ್ಲಿಷ್ ಭಾಷಾ ಜ್ಞಾನ ಅನಿವಾರ್ಯವಾಗಿದೆ ಎಂದು ಸಂತೆಮರೂರು ಗ್ರಾಪಂ ಸದಸ್ಯ ಸಂತೋಷ್ ಹೇಳಿದರು. ತಾಲೂಕಿನ ಶಣವಿನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂಗ್ಲಿಷ್ ಫೆಸ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆಯನ್ನು ಉತ್ತಮ ರೀತಿಯಲ್ಲಿ ಕಲಿಸಿದರೆ ಮುಂದೆ ಈ ಭಾಷೆಯಲ್ಲಿ ಪರಿಣತಿ ಸಾಧಿಸಲು ನೆರವಾಗುತ್ತದೆ. ನಮ್ಮ ಮಾತೃ ಭಾಷೆ ಕನ್ನಡವನ್ನೂ ಮರೆಯದೆ ಹೆಚ್ಚಿನ ಆದ್ಯತೆ ನೀಡಿದರೆ ಉತ್ತಮ ಎಂದು ಸಲಹೆ ನೀಡಿದರು.ಹಾಸನ ಡಯಟ್‌ನ ಹಿರಿಯ ಉಪನ್ಯಾಸಕ ರಂಗನಾಥ್, ಶಿಕ್ಷಣ ಸಂಯೋಜಕ ಚಂದ್ರಶೇಖರ್, ಸಮೂಹ ಸಂಪನ್ಮೂಲ ವ್ಯಕ್ತಿ ನಯಾಜ್, ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್, ಮುಖ್ಯ ಶಿಕ್ಷಕಿ ಯಾಸ್ಮಿನ್ ತಾಜ್, ಸಹ ಶಿಕ್ಷಕರಾದ ಜಗದೀಶ್, ಪರಮೇಶ್, ಸಾಗರ್ ಇದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.