

ಬೆಳಗಾವಿ: ನಗರದಲ್ಲಿ ಗಣೇಶ ವಿಸರ್ಜನೆ ಮಾರ್ಗ ಸೇರಿದಂತೆ ಇತರೆ ರಸ್ತೆಗಳಲ್ಲಿ ಬಿದ್ದಿರುವ ಎಲ್ಲ ಗುಂಡಿಗಳನ್ನು ಮುಚ್ಚಲು 44ಲಕ್ಷ ರೂ. ಅಂದಾಜು ವೆಚ್ಷದ ಟೆಂಡರ್ ಕರೆಯಲಾಗಿದೆ ಎಂದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ತಿಳಿಸದರು.
ನಗರದ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಪಿಲೇಶ್ವರ, ಅನಗೋಳ, ಜಕ್ಕರೆಹೊಂಡ, ಕೋಟೆ ಕೆರೆ, ಕಣಬರ್ಗಿ ಟ್ಯಾಂಕ್ ಸೇರಿದಂತೆ 8 ಸ್ಥಳಗಳಲ್ಲಿ ಗಣೇಶ ವಿಸರ್ಜನೆ ಗೆ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗದಲ್ಲಿ ರಸ್ತೆ, ಚರಂಡಿಗಳ ದುರಸ್ತಿ ಮಾಡಲು ಕ್ರಮ ವಹಿಸಲಾಗಿದೆ. ಅಲ್ಲದೆ, 43 ಲಕ್ಷ ರೂ. ವೆಚ್ಚದ ಟೆಂಡರ್ ಕರೆಯಲಾಗಿದೆ ಎಂದರು.