ಮಾಲಂಬಿಯಲ್ಲಿ ದೇವರುಗಳ ಉತ್ಸವ ಸಂಪನ್ನ

30ss2devastana bhaktaru
ಮಾಲಂಬಿ ಗ್ರಾಮದಲ್ಲಿ ನಡೆದ ವಿವಿಧ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು.
Published on

ಶನಿವಾರಸಂತೆ: ಸಮೀಪದ ಮಾಲಂಬಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಮತ್ತು ಶ್ರೀ ಕನ್ನಂಬಾಡಿ ಅಮ್ಮನವರ ವಾರ್ಷಿಕೋತ್ಸವ ಮಂಗಳವಾರ ಸಂಪನ್ನಗೊಂಡಿತು.

ವಾರ್ಷಿಕ ಪೂಜಾ ಮಹೋತ್ಸವ ಅಂಗವಾಗಿ ಸೋಮವಾರ ಬೆಳಗ್ಗೆ ದೇವಸ್ಥಾನಗಳಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ ಆರತಿಯೊಂದಿಗೆ ದೇವರುಗಳನ್ನು ಗಂಗಾಸ್ನಾನಕ್ಕೆ ವಾದ್ಯಗೋಷ್ಠಿ, ಕುಂಭ ಕಳಸ ಮೆರವಣಿಗೆಯೊಂದಿಗೆ ಕೊಂಡಯ್ಯಲಾಯಿತು. ನಂತರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮತ್ತು ಶ್ರೀ ಬಸವಣ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ರಾತ್ರಿಯಿಂದ ಮಂಗಳವಾರ ಬೆಳಗ್ಗೆಯವರೆಗೂ ದೇವರ ಉತ್ಸವ ನಡೆಸಲಾಯಿತು.

ಮಂಗಳವಾರ ಬೆಳಗ್ಗೆ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾ ಮಂಗಳಾರತಿ, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದೊಂದಿಗೆ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಪೂಜಾ ಮಹೋತ್ಸವದಲ್ಲಿ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net