ತಾರಕ ಮಂತ್ರ ಸಪ್ತಾಹ, ಜಾತ್ರಾ ಮಹೋತ್ಸವಕ್ಕೆ ಚಾಲನೆ

New Project (8)
Published on

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದ, ಶ್ರೀರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಮಾ. 30ರಿಂದ ಏ.6ರವರೆಗೆ ನಡೆಯಲಿರುವ 65ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾಪನಾ ಜಾತ್ರೋತ್ಸವಕ್ಕೆ ವೈದಿಕ ವಿಧಿವಿಧಾನಗಳೊಂದಿಗೆ ಜಗದ್ಗುರು ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ, ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ನೇತೃತ್ವದಲ್ಲಿ ಅಖಂಡ ನಂದಾದೀಪ ಬೆಳಗಿಸಿ ಚಾಲನೆ ನೀಡಲಾಯಿತು.

ಹುಬ್ಬಳ್ಳಿ ಕೇಶ್ವಾಪುರ ಅದ್ವೈತ ಪೀಠದ ಸ್ವಾಮೀಜಿ ದಯಾನಂದ ಬಾರ್ಕುರು, ಶಾಸಕ ಹರೀಶ್ ಪೂಂಜ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಶ್ರೀಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಸಂಚಾಲಕ ಜಯಂತ ಕೋಟ್ಯಾನ್, ಧರ್ಮಸ್ಥಳ ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಬಿ.ಭುಜಬಲಿ ಧರ್ಮಸ್ಥಳ, ಸದಾನಂದ ಪೂಜಾರಿ ಉಂಗಿಲಬೈಲು, ಮಂಜುನಾಥ ಶೆಟ್ಟಿ ನಿಡಿಗಲ್, ಜಿ.ಪಂ. ಮಾಜಿ ಸದಸ್ಯೆ ನಮಿತಾ ತೋಟತ್ತಾಡಿ, ಪ್ರಶಾಂತ್ ಪಾರೆಂಕಿ, ರಾಜೇಶ್ ಪೂಜಾರಿ ಮೂಡುಕೋಡಿ, ಗ್ರಾಪಂ ಸದಸ್ಯ ಹರೀಶ್ ಸುವರ್ಣ ಕನ್ಯಾಡಿ, ಅಣ್ಣಿ ಪೂಜಾರಿ ಕಾಶಿಬೆಟ್ಟು, ಚಿದಾನಂದ ಇಡ್ಯಾ, ತಿಮ್ಮಪ್ಪ ಗೌಡ ಬೆಳಾಲು, ಸುಜಾತ ಅಣ್ಣಿ ಪೂಜಾರಿ, ವಿನೋದಿನಿ ರಾಮಪ್ಪ, ಜಯಶಂಕರ್ ಎಂ.ಬಿ, ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಧರ್ಮಸ್ಥಳ, ಕಲ್ಮಂಜ ಗ್ರಾಮ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ, ಬೆಳಾಲು ಗ್ರಾಮ ಸಮಿತಿ ಅಧ್ಯಕ್ಷ ಜಾರಪ್ಪ ಪೂಜಾರಿ ಬೆಳಾಲು ಪಿ, ಸುನೀಲ್ ಕನ್ಯಾಡಿ, ಗುರುದೇವ ಮಠದ ಟ್ರಸ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ, ಚಂದಪ್ಪ ಪೂಜಾರಿ ಬಂದಾರು, ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು, ಊರವರು ಉಪಸ್ಥಿತರಿದ್ದರು.

ಅಲಂಕಾರ ಪೂಜೆ, ಮಹಾಗಣಯಾಗ

ಬೆಳಗ್ಗೆ ಶ್ರೀ ನಿತ್ಯಾನಂದ ಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಮಹಾದೇವಿಗೆ ಅಲಂಕಾರ ಪೂಜೆ, ಮಹಾಗಣಪತಿಯಾಗ, ಶ್ರೀ ಸಿದ್ಧಿ ವಿನಾಯಕ, ಕ್ಷೇತ್ರಪಾಲ ಗಣಪತಿ ದೇವರಿಗೆ ವಿಶೇಷ ಪೂಜೆ ಲಕ್ಷ್ಮೀಪತಿ ಗೋಪಾಲಚಾರ್ಯ ಮತ್ತು ಅರ್ಚಕ ವೃಂದದ ನೇತೃತ್ವದಲ್ಲಿ ನಡೆಯಿತು. ತೋಟತ್ತಾಡಿ ಮತ್ತು ಚಿಬಿದ್ರೆ ಗ್ರಾಮಸ್ಥರ ನೇತೃತ್ವದಲ್ಲಿ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net