ಯುವ ಪೀಳಿಗೆಗೆ ಮಾದರಿಯಾಗಲಿದೆ ಉತ್ಸವ

PHOTO
ಸಿಂಧನೂರು ಆರ್‌ಜಿಎಂ ಶಾಲಾ ಮೈದಾನದಲ್ಲಿ ಸಾಂಸ್ಕೃತಿಕ ದಸರಾ ಕಾರ್ಯಕ್ರಮಕ್ಕೆ ಸಚಿವ ಶಿವರಾಜ ಎಸ್.ತಂಗಡಗಿ ಚಾಲನೆ ನೀಡಿದರು. ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಸಿದ್ದರಾಮೇಶ್ವರ ಶರಣರು, ಮಹಾಲಿಂಗ ಸ್ವಾಮೀಜಿ, ಅಮರಗುಂಡ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಇತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಸಿಂಧನೂರು

ಹದಿನಾಲ್ಕನೇ ಶತಮಾನದ ವಿಜಯನಗರ ಸಾಮ್ರಾಜ್ಯದಲ್ಲಿ ದಸರಾ ಐತಿಹಾಸಿಕ ಪಾತ್ರ ವಹಿಸಿತ್ತು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದರು.

ನಗರದ ಆರ್‌ಜಿಎಂ ಕಾಲೇಜು ಮೈದಾನದಲ್ಲಿ ಸಿಂಧನೂರು ದಸರಾ ಉತ್ಸವದಲ್ಲಿ ಸಾಂಸ್ಕೃತಿಕ ದಸರಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಸಿಂಧನೂರಿನಲ್ಲಿ ದಸರಾ ಆಚರಣೆಗೆ ಚಾಲನೆ ನೀಡಿರುವುದು ಸಂತಸದ ಸಂಗತಿಯಾಗಿದೆ. ಈ ಆಚರಣೆಯು ಯುವ ಪೀಳಿಗೆಗೆ ಮಾದರಿಯಾಗಲಿದೆ. ದಸರಾ ಆಚರಣೆ ಪ್ರತಿ ವರ್ಷವೂ ಮುಂದುವರಿಯಲಿ ಎಂದರು.

ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡರು ಒಗ್ಗೂಡಿ ಸಹಕಾರ ಮನೋಭಾವದಿಂದ ಈ ದಸರಾ ಕಾರ್ಯಕ್ರಮ ಆಚರಿಸುತ್ತಿದ್ದಾರೆ. ಈ ಬೆಳವಣಿ ಯುವ ಪೀಳಿಗೆಗೆ ಇತಿಹಾಸ ತಿಳಿಸುವ ಕೆಲಸ ಮಾಡಿದಂತಾಗುತ್ತದೆ.ದಸರಾ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸೌಹಾರ್ದತೆಯ ಹಬ್ಬ ಇದಾಗಿದ್ದು, ಹಬ್ಬವು ನಿರಂತರವಾಗಿ ನಡೆಯಲಿ ಎಂದರು.

ಮೆರವಣಿಗೆ: ನಗರದ ಅಂಬಾದೇವಿ ದೇವಸ್ಥಾನದಿಂದ ಆರ್‌ಜಿಎಂ ಶಾಲಾ ಮೈದಾನದವರೆಗೆ ಅಂಬಾದೇವಿಯ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ಮೈದಾನದ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆವಹಿಸಿದ್ದರು. ಮಾದಯ್ಯ ಗುರುವಿನ್, ಮಂಜುನಾಥ ಗುರುವಿನ್, ಪಾರ್ವತಿ ಅಕ್ಕನವರು, ಮಲ್ಲಿನಾಥ ಶಾಸ್ತ್ರಿ, ಸಾನ್ನಿಧ್ಯವಹಿಸಿದ್ದರು. ನಗರಸಭೆ ಸದಸ್ಯರಾದ ಡಿ.ಸತ್ಯನಾರಾಯಣ, ಎಚ್.ಬಾಷಾ, ತಹಸೀಲ್ದಾರ್ ಅರುಣ್ ಎಚ್.ದೇಸಾಯಿ, ಪೌರಾಯುಕ್ತ ಮಂಜುನಾಥ ಗುಂಡೂರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net