

ಬೆಳಗಾವಿ: ಸಾಂಸ್ಕೃತಿಕ ಪರಂಪರೆ ಉಳಿಸಲು ಹಾಗೂ ಸಾರ್ವಜನಿಕರಲ್ಲಿ ಏಕತೆ ಬೆಳೆಸುವಲ್ಲಿ ಕನ್ನಡ ಹಬ್ಬದಂತಹ ಕಾರ್ಯಕ್ರಮ ಸಹಕಾರಿಯಾಗಿವೆ ಎಂದು ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾಣದ ಕಾರ್ಯಾಧ್ಯಕ್ಷೆ, ಮಾಜಿ ಸಂಸದೆ ಮಂಗಲ ಅಂಗಡಿ ಹೇಳಿದರು.
ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಭಾಷೆ ಬೆಳೆವಣಿಗೆಯು ಬಳಕೆಯ ಮೇಲೆ ಅವಲಂಬನೆಯಾಗಿರುತ್ತದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕನ್ನಡ ಬಳಸುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡದ ಕಂಪು ಪಸರಿಸುವಂತೆ ಮಾಡಬೇಕು. ಕನ್ನಡ ಅಸ್ಮಿತೆ ಉಳಿಸಿಕೊಳ್ಳಬೇಕು. ರಾಜ್ಯವು ಸಂಸ್ಕೃತಿ, ಕಲೆ ಮತ್ತು ಕೌಶಲಗಳ ನಾಡಾಗಿದ್ದು, ಉನ್ನತ ಶಿಕ್ಷಣಕ್ಕೆ ಬೇರೆ ರಾಜ್ಯಗಳಿಗಿಂತ ಪ್ರಾಮುಖ್ಯತೆ ಕೊಟ್ಟಿದೆ. ಉನ್ನತ ತಾಂತ್ರಿಕ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ಸ ಪಡೆದಿದೆ ಎಂದರು.
ಇದೇ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಂಗಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಸ್ಪೂರ್ತಿ ಅಂಗಡಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ, ಪ್ರಾಚಾರ್ಯ ಡಾ. ಆನಂದ ದೇಶಪಾಂಡೆ, ಡಾ.ಕಿರಣ ಪೋತದಾರ, ಪ್ರೊ.ಗೌತಮ ದೆಮಟ್ಟಿ ಇತರರಿದ್ದರು. ದೀಪಾ ಬೆಣ್ಣಿ ನಿರೂಪಿಸಿ, ವಂದಿಸಿದರು.