ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಅತ್ಯಂತ ಅಮಾನವೀಯ ಘಟನೆ : ಎಚ್‌ಡಿಕೆ

HDK
Published on

ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಅತ್ಯಂತ ಅಮಾನವೀಯ ಘಟನೆ. ಇದರಲ್ಲಿ ನಮ್ಮ ಆಡಳಿತ ವ್ಯವಸ್ಥೆಯ ವೈಫಲ್ಯವೂ ಎದ್ದು ಕಾಣುತ್ತಿದೆ. ಈ ಪ್ರಕಣದರಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭ್ರೂಣ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಎಲ್ಲರೂ ತಲೆ ತಗ್ಗಿಸುವ ಪ್ರಕರಣವಾಗಿದೆ. ಮುಂದೆ ಈ ರೀತಿಯಾಗಬಾರದೆಂದು ನಾನು ಪೋಷಕರಿಗೂ ಮನವಿ ಮಾಡುತ್ತೇನೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಕೂಡ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವನೆ ಸರಿಯಲ್ಲ. ಭ್ರೂಣಹತ್ಯೆ ಕಾನೂನು ಬಾಹಿರ, ಪಾಪಕೃತ್ಯ ಎಂದು ಹೇಳಿದರು.

ಇತ್ತೀಚೆಗೆ ಮಕ್ಕಳ ಕಳ್ಳತನ ಪ್ರಕರಣ ಪ್ರಕಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಮಕ್ಕಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸರ್ಕಾರವೂ ಜವಾಬ್ದಾರಿ ಹೊರಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net