ಭ್ರೂಣ ಹತ್ಯೆ ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ

03M.D.R.1
ಹೆಣ್ಣು ಭ್ರೂಣ ಹತ್ಯೆ ಕುರಿತು ಮದ್ದೂರು ಪಟ್ಟಣದಲ್ಲಿ ಜನಜಾಗೃತಿ ಜಾಥಾ ನಡೆಯಿತು. ಎಂ.ನಾರಾಯಣ್, ಸುಜಾತಾ, ಭಾಗ್ಯಾ, ರಾಜೇಶ್ವರಿ, ಶೋಭಾ, ಜಯಲಕ್ಷ್ಮೀ, ಉಮಾ ಇದ್ದರು.
Published on

ಮದ್ದೂರು : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮದ್ದೂರು ತಾಲೂಕು ಇವರ ವತಿಯಿಂದ ಸೋಮವಾರ ಬಾಲ್ಯ ವಿವಾಹ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಅಧಿನಿಯಮ, ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಕುರಿತು ಪಟ್ಟಣದಲ್ಲಿ ಜನಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಸಿಡಿಪಿಒ ಎಂ.ನಾರಾಯಣ ಮಾತನಾಡಿ, ಬಾಲ್ಯ ವಿವಾಹವು ಸಮಾಜದ ಕೆಡುಕು. ಇದರಿಂದ ಬೆಳೆಯುತ್ತಿರುವ ಮಕ್ಕಳ ಅರೋಗ್ಯದ ಮೇಲೆ ಹಲವಾರು ದುಷ್ಪರಿಣಾಮಗಳು ಉಂಟಾಗುತ್ತವೆ. ಕಡಿಮೆ ತೂಕದ ಮಕ್ಕಳ ಜನನ, ಬಾಲಕಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ, ವಿದ್ಯಾಭ್ಯಾಸ ಕುಂಠಿತವಾಗುತ್ತದೆ ಮತ್ತು ಭವಿಷ್ಯವೇ ಕಮರಿಹೋಗುವ ಸಂಭವ ಇರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಕೂಡ ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದಾಗ ಮಾತ್ರ ಹೆಣ್ಣು ಮತ್ತು ಗಂಡು ಮಕ್ಕಳು ಸಮಾನರು ಎಂಬ ಎಂಬ ತಿಳಿವಳಿಕೆ ಬರುತ್ತದೆ ಎಂದು ಹೇಳಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಹೆಣ್ಣು ಭ್ರೂಣ ಹತ್ಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಹಿರಿಯ ಮಹಿಳಾ ಮೇಲ್ವಿಚಾರಕಿ ಸುಜಾತಾ, ಮೇಲ್ವಿಚಾರಕೀಯರಾದ ಭಾಗ್ಯಾ, ರಾಜೇಶ್ವರಿ, ಶೋಭಾ, ಜಯಲಕ್ಷ್ಮೀ, ಉಮಾ, ನೇತ್ರಾ, ಅಸ್ಮಾಬಾನು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net