ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅಮಾನತು

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅಮಾನತು
Published on

ಹಾಸನ: ಶಿಕ್ಷಕರಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಮಹಿಳಾ ಶಿಕ್ಷಕಿಯರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ, ಶಿಷ್ಟಾಚಾರ ಉಲ್ಲಂಘನೆ ಹಾಗೂ ಕರ್ತವ್ಯಲೋಪದ ಗಂಭೀರ ಆರೋಪಗಳು ಅವರ ಮೇಲೆ ದಾಖಲಾಗಿವೆ. ಇತ್ತೀಚೆಗೆ ನಡೆದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೇಲೂರು ಶಾಸಕ ಎಚ್.ಕೆ.ಸುರೇಶ್ ಹಾಗೂ ಬಿಇಒ ರಾಜೇಗೌಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು.

ಬೇಲೂರು ಬಿಇಒ ರಾಜೇಗೌಡ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಶಿಕ್ಷಕರಿಗೆ ಕಿರುಕುಳ ನೀಡುವುದರ ಜತೆಗೆ ಮಹಿಳಾ ಶಿಕ್ಷಕಿಯರಿಗೆ ಅವ್ಯಾಚ್ಯ ಶಬ್ದ ಬಳಸಿದ್ದಾರೆ ಎಂದು ಸಭೆಯಲ್ಲಿ ಶಾಸಕರು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೇಗೌಡ ಕೂಡ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಘಟನೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net